×
Ad

ವಿಶ್ವಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹಕ್ಕೆ ಚಾಲನೆ

Update: 2022-09-17 21:37 IST

ಮಂಗಳೂರು : ಸಮಗ್ರ ಬಂಟರ ಸಹಕಾರದಿಂದ ವಿಶ್ವ ಬಂಟರ ಮಾಹಿತಿ ಸಂಗ್ರಹಗೊಳ್ಳಲು ಸಾಧ್ಯ ಎಂದು ಮಂಗಳೂರು ಬಾರ್ ಅಸೋಸಿಯೇಶನ್ ಅಧ್ಯಕ್ಷ ಕೆ. ಪೃಥ್ವಿರಾಜ್ ರೈ ಅಭಿಪ್ರಾಯಪಟ್ಟರು.

ಸೆ.23ರಂದು ನಡೆಯಲಿರುವ ವಿಶ್ವ ಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹದ ಚಾಲನೆಯ ಕರಪತ್ರವನ್ನು ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸೆ.24ರಂದು ನಡೆಯುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಬಿಡುಗಡೆಗೊಳಿಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್‌ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಮೃತೋತ್ಸವ ಸಮಿತಿಯ ಸಂಚಾಲಕಿ ಶಾಲಿನಿ ಶೆಟ್ಟಿ, ಸ್ವಾಗತ ಸಮಿತಿಯ ಅಧ್ಯಕ್ಷ ವಸಂತ ಶೆಟ್ಟಿ, ತಾಲೂಕು ಬಂಟರ ಸಂಘದ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಉಪಸ್ಥಿತರಿದ್ದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷೆ ವೀಣಾ ಟಿ. ಶೆಟ್ಟಿ ಸ್ವಾಗತಿಸಿದರು. ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಂದಿಸಿದರು. ಮಂಜುಳಾ ಶೆಟ್ಟಿ ಹಾಗೂ ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News