×
Ad

ಸೆ.21: ಪತ್ರಕರ್ತರಿಗೆ ಸ್ವ ಉದ್ಯೋಗ ಮಾಹಿತಿ ಶಿಬಿರ

Update: 2022-09-17 21:44 IST

ಮಂಗಳೂರು, ಸೆ.17: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸ್ವ ಉದ್ಯೋಗ ಮಾಹಿತಿ ಶಿಬಿರವು ಸೆ.21ರಂದು ಬೆಳಗ್ಗೆ 11.30 ಗಂಟೆಗೆ ನಗರದ ಬೆಂದೂರ್ ವೆಲ್‌ನಲ್ಲಿರುವ ತೋಟಗಾರಿಕಾ ಇಲಾಖೆಯ  ಕಚೇರಿಯ ಸಭಾಂಗಣದಲ್ಲಿ  ನಡೆಯಲಿದೆ.

ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಶಿಬಿರ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಪಂ ಸಿಇಒ ಡಾ.ಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್. ಆರ್.ನಾಯ್ಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News