ಬೋಳಿಯಾರ್‌ನಲ್ಲಿ ತಹಶೀಲ್ದಾರ್ ಗ್ರಾಮವಾಸ್ತವ್ಯ: ಫಲಾನುಭವಿಗಳಿಗೆ ಸೌಲಭ್ಯಗಳ ಮಂಜೂರಾತಿ ಪ್ರತಿ ವಿತರಣೆ

Update: 2022-09-17 16:21 GMT

ಕೊಣಾಜೆ: ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ದಲ್ಲಿ  ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಮಂಜೂರಾತಿ ಆದೇಶ ಪ್ರತಿಯನ್ನು ವಿತರಿಸಿ,‌ಗ್ರಾಮಸ್ಥರ ಅಹವಾಲನ್ನು ತಹಶಿಲ್ದಾರರು ಸ್ವೀಕರಿಸಿದರು.

ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದ ಉಳ್ಳಾಲ ತಾಲ್ಲೂಕು ತಹಶಿಲ್ದಾರರಾದ ಡಿ ಎ ಪುಟ್ಟರಾಜು ಅವರು,  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸರಕಾರದ ಜನಸ್ನೇಹಿ ಕಾರ್ಯಕ್ರಮದ ಅಂಗವಾಗಿ  ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತದೆ. ಇಲಾಖೆಯ ಎಲ್ಲಾ ಯೋಜನೆಗಳನ್ನು ಅರ್ಹರಿಗೆ ಕಾಲಮಿತಿಯಲ್ಲಿ ತಲುಪಿಸುವುದು ಇದರ ಉದ್ದೇಶವಾಗಿದೆ.  ಈ ಕಾರ್ಯಕ್ರಮದಲ್ಲಿ  ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಹಾಜರಿದ್ದು ಪ್ರಾಮಾಣಿಕವಾಗಿ  ಕಾರ್ಯನಿರ್ವಹಿಸಲಿದ್ದಾರೆ ಎಂದು  ಹೇಳಿದರು.

ಕಾರ್ಯಕ್ರಮದಲ್ಲಿ ಬೋಳಿಯಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಜೆಸಿಂತಾ ಪಿಂಟೋ, ಉಪಾಧ್ಯಕ್ಷರಾದ ಅಬ್ದುಲ್ ಶಕೂರ್, ಉಪತಹಶೀಲ್ದಾರರಾದ ನವನೀತ್ ಮಾಳವ, ಕಂದಾಯ ನಿರೀಕ್ಷಕರಾದ ಮಂಜುನಾಥ ಕೆ ಹೆಚ್,  ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಸುಧಾರಾಣಿ ವೇದಿಕೆಯಲ್ಲಿದ್ದರು.

ಆರೋಗ್ಯ ಇಲಾಖೆಯಿಂದ ಬೋಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಾದ ಡಾ.ಸುನೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯವರಾದ ಹರೀಶ್ ಕೆ, ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರ ಸಮನ್ವಯಾಧಿಕಾರಿಯವರಾದ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ತಮ್ಮ ತಮ್ಮ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿವಿಧ ವೇತನದ ಮಂಜೂರಾತಿ ಆದೇಶದ ಪ್ರತಿಯನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ತಹಶಿಲ್ದಾರರಿಂದ ಸ್ಥಳ ಪರಿಶೀಲನೆ

ತಹಶೀಲ್ದಾರರು ಪಲ್ಲ ಸೈಟ್ ಎಂಬಲ್ಲಿ ರಸ್ತೆ ತಕರಾರಿನ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಕೊರಗ ಸಮಾಜದ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಅಂಬೇಡ್ಕರ್ ಭವನ ನಿರ್ಮಾಣ, ರಾಜಕಾಲುವೆ ಒತ್ತುವರಿ ಬಗ್ಗೆ ಸ್ಥಳ ಪರಿಶೀಲಿಸಿದರು. ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ಬಂದ ಮನವಿಯನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹಾರವನ್ನು ಸೂಚಿಸಿದರು. ಗ್ರಾಮಕರಣಿಕರಾದ ಲಾವಣ್ಯ, ರೇಷ್ಮಾ, ನವ್ಯ ಎಸ್ ಎನ್ ರಾವ್, ತೌಫಿಕ್, ನಿಂಗಪ್ಪ ಜಜ್ಜೂರಿ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News