ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

Update: 2022-09-17 16:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.17: ರಾಜಧಾನಿ ಬೆಂಗಳೂರಿನಲ್ಲಿ ತಾತ್ಕಲಿಕವಾಗಿ ನಿಂತಿರುವ ವಾಹನಗಳ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಟೋಯಿಂಗ್ ಸಂಬಂಧ ಯಾವುದೇ ರೀತಿಯ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲ. ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಿ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದ ಅವರು, ಸಾರ್ವಜನಿಕರಲ್ಲಿ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಟೋಯಿಂಗ್ ಸ್ಥಗಿತಗೊಳಿಸಲಾಗಿತ್ತು.ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News