×
Ad

ದಸರಾಗೆ ಪ್ರಧಾನಿ ಮೋದಿ ಬರುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

Update: 2022-09-17 22:44 IST

ಮೈಸೂರು,ಸೆ.17: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನಿಡಿದರು.

ನಗರದಲ್ಲಿ ಶನಿವಾರ ಮಾದ್ಯಮದವರೊಂದಿಗೆ ಮಾತನಾಡಿದ  ಸಚಿವ ಎಸ್.ಟಿ ಸೋಮಶೇಖರ್, ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅರಮನೆಯ ಭೇಟಿ ಬಗ್ಗೆ ಮಾಹಿತಿ ಕೇಳಲಾಗಿದೆ. ಇನ್ನೂ ರಾಷ್ಟ್ರಪತಿಗಳಿಂದ ಅದಕ್ಕೆ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ. ಕೇಂದ್ರದ ನಾಲ್ಕು ಮಂತ್ರಿಗಳು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕೂರುವವರ ಪಟ್ಟಿ ಅಂತಿಮಗೊಳ್ಳುತ್ತದೆ . ದಸರಾ ಪಾಸ್ ಮತ್ತು ಗೋಲ್ಡ್ ಕಾರ್ಡ್ ಸಂಜೆಯೊಳಗೆ ಅಂತಿಮ ತೀರ್ಮಾನ ಮಾಡುತ್ತೇವೆ. ಯುವದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಧ್ಯಾಹ್ನ ಸಭೆ ನಡೆಸಿ ಸಂಜೆಯೊಳಗೆ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ದಸರಾಗೆ ಹಣ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಹಣ ಬಿಡುಗಡೆ ಮಾಡಿರುವುದಾಗಿ ಸ್ವತಹ ಸಿಎಂ ಹೇಳಿದ್ದಾರೆ. ವಿದ್ಯುತ್ ದೀಪಾಲಂಕಾರಕ್ಕೆ 4.5 ಕೋಟಿ ನಿಗದಿ ಮಾಡಲಾಗಿದೆ. ಎಲ್ಲವನ್ನೂ ವ್ಯವಸ್ಥಿತವಾಗಿ ಮಾಡುತ್ತೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News