ರಾಜ್ಯದಲ್ಲಿ ಶನಿವಾರ 476 ಮಂದಿಗೆ ಕೊರೋನ ದೃಢ; ಓರ್ವ ಮೃತ್ಯು

Update: 2022-09-17 17:36 GMT

ಬೆಂಗಳೂರು, ಸೆ.17: ರಾಜ್ಯದಲ್ಲಿ ಶನಿವಾರ 476 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಮೃತಪಟ್ಟಿದ್ದು, 358 ಜನರು ಗುಣಮುಖರಾಗಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,61,157ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,232ಕ್ಕೆ ತಲುಪಿದೆ.  
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 3735ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.      

ಒಬ್ಬರ ಸಾವು: ಕೋವಿಡ್ ಸೋಂಕಿನಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 476 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 5, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರುನಗರ 215, ಬೀದರ್ 1, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣಕನ್ನಡ 8, ದಾವಣಗೆರೆ 4, ಧಾರವಾಡ 13, ಹಾಸನ 9, ಕಲಬುರಗಿ 5, ಕೊಡಗು 24, ಕೋಲಾರ 8, ಕೊಪ್ಪಳ 1, ಮಂಡ್ಯ 7, ಮೈಸೂರು 18, ರಾಯಚೂರು 1, ರಾಮನಗರ 97, ಶಿವಮೊಗ್ಗ 12, ತುಮಕೂರು 11, ಉಡುಪಿ 7, ಉತ್ತರಕನ್ನಡ 11, ವಿಜಯಪುರ  ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ. 
 
ರಾಜಧಾನಿಯಲ್ಲಿ 215 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶನಿವಾರದಂದು 215  ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 173 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,69,969   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,985 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News