×
Ad

ಅ.2 ರಂದು ಬದನವಾಳು ಗ್ರಾಮಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ: ಸ್ಥಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ

Update: 2022-09-17 23:12 IST

ಮೈಸೂರು,ಸೆ.17: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಬದನವಾಳು ಗ್ರಾಮಕ್ಕೆ ಮಹಾತ್ಮಾಗಾಂಧಿಜಿ ಭೇಟಿ ನೀಡಿದ್ದ ಸ್ಥಳಕ್ಕೆ ಅ.2 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ಹಿನ್ನಲೆಯಲ್ಲಿ ಶನಿವಾರ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

1927 ರಂದು ಮಹಾತ್ಮಾ ಗಾಂಧಿಜಿ  ಅವರು ಬದನವಾಳು ಗ್ರಾಮಕ್ಕೆ  ಭೇಟಿ ನೀಡಿದ್ದರು. ಈ ಸ್ಥಳದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ನಡೆಸುತ್ತಿದ್ದು, ಇಲ್ಲಿ ಖಾದಿ ನೂಲಿನಲ್ಲಿ ಚರಕದ ಮೂಲಕ ಹಲವು ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದೆ. ಈ ಸ್ಥಳಕ್ಕೆ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಅಕ್ಟೋಬರ್ 2 ರಂದು ಭೇಟಿ ನೀಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಗಾಂಧಿಜಿ ಭೇಟಿ ನೀಡಿದ್ದ ಸ್ಥಳದ ಕೆಲವು ಮಾಹಿತಿಗಳನ್ನು ಪಡೆದರು. ಮೊನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಹೋಗಿದ್ದರು.

ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಯಾಣ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಂಜನಗೂಡು ನಗರಸಭಾ ಸದಸ್ಯರುಗಳಾದ ಪ್ರದೀಪ್, ಎಸ್.ಪಿ.ಮಹೇಶ್, ಕಾಂಗ್ರೆಸ್ ಮುಖಂಡರುಗಳಾದ ಎಸ್.ಸಿ.ಬಸವರಾಜು, ಬಿ.ಎಂ.ನಾಗೇಶ್ ರಾಜ್, ಹುಂಡಿ ನಾಗರಾಜು, ಶಿವಪ್ಪ ದೇವರು, ಕೆ.ಜಿ.ಮಹೇಶ್, ಬಸವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News