ಗರ್ಲ್ಸ್ ಹಾಸ್ಟೆಲ್ ನ ಖಾಸಗಿ ವೀಡಿಯೊ ಆನ್ ಲೈನ್ ನಲ್ಲಿ ಸೋರಿಕೆ: ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಭಾರೀ ಪ್ರತಿಭಟನೆ

Update: 2022-09-18 05:44 GMT
Photo:NDTV

ಚಂಡೀಗಢ: ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಮೇಟ್‌ಗಳ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದ ನಂತರ ಭಾರೀ  ಪ್ರತಿಭಟನೆಗಳು ನಡೆದಿವೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ ಎಂದು NDTV ವರದಿ ಮಾಡಿದೆ.

ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾವುಗಳು ಅಥವಾ ಆತ್ಮಹತ್ಯೆಯ ಪ್ರಯತ್ನಗಳು ವರದಿಯಾಗಿಲ್ಲ ಎಂದರು.

"ಇದು ವಿದ್ಯಾರ್ಥಿನಿಯೊಬ್ಬಳು ವೀಡಿಯೊವನ್ನು ಚಿತ್ರೀಕರಿಸಿದ ಹಾಗೂ  ಪ್ರಸಾರ ಮಾಡಿದ ವಿಷಯವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾವುಗಳು ಅಥವಾ ಆತ್ಮಹತ್ಯೆಯ ಪ್ರಯತ್ನಗಳು ವರದಿಯಾಗಿಲ್ಲ. ವೈದ್ಯಕೀಯ ದಾಖಲೆಗಳ ಪ್ರಕಾರ, ಆತ್ಮಹತ್ಯೆಯಿಂದ ಸಾಯುವ ಯಾವುದೇ ಪ್ರಯತ್ನ ವರದಿಯಾಗಿಲ್ಲ" ಎಂದು ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ವೀಡಿಯೊ ಸೋರಿಕೆಯಿಂದ ಹಲವಾರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ವಿಶ್ವವಿದ್ಯಾಲಯ ಹಾಗೂ  ಪೊಲೀಸರು ಎರಡೂ ತಳ್ಳಿಹಾಕಿವೆ. ಖಾಸಗಿಯಾಗಿ ನಡೆಸಲ್ಪಡುವ ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಒಬ್ಬ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾಳೆ ಹಾಗೂ  ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

"ಇದು ಗಂಭೀರ ವಿಷಯವಾಗಿದೆ, ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಬಿಡಲಾಗುವುದಿಲ್ಲ ಎಂದು ಎಲ್ಲಾ ವಿದ್ಯಾರ್ಥಿಗಳ ಪೋಷಕರಿಗೆ ಭರವಸೆ ನೀಡಲು ನಾನು ಇಲ್ಲಿದ್ದೇನೆ" ಎಂದು ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಹೇಳಿದ್ದಾರೆಂದು  ಎಎನ್‌ಐ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News