ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ
Update: 2022-09-18 11:10 IST
ಕಲಬುರಗಿ, ಸೆ.18: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಯುವಕನೋರ್ವನನ್ನು ತಂಡವೊಂದು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಕಳದೆ ರಾತ್ರಿ ನಡೆದಿದೆ.
ನಗರದ ಹೌಸಿಂಗ್ ಬೋರ್ಡ್ ಕಾಲನಿ ನಿವಾಸಿ ಝಮೀರ್(23) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಐದಾರು ಮಂದಿ ದುಷ್ಕರ್ಮಿಗಳ ತಂಡ ಝಮೀರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಇದರಿಂದ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಝಮೀರ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.