ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ.ಎಸ್ ಯಡಿಯೂರಪ್ಪ

Update: 2022-09-18 07:13 GMT

ಹುಬ್ಬಳ್ಳಿ:  'ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು,   'ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನವರು ಭಾರತ ಜೊಡೋ ಮಾಡಲಿ, ರಥಯಾತ್ರೆಯೇ ನಡೆಸಲಿ. ಜನರು ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಜೊತೆಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ' ಎಂದು ಹೇಳಿದರು. 

' ಬಳ್ಳಾರಿಯ ವಿಮ್ಸ್ ನಲ್ಲಿ ಮೂವರು ರೋಗಿಗಳು ಸಾವನ್ನಪ್ಪಿರುವ ಪ್ರಕರಣ ಸರಕಾರ ತನಿಖೆ ನಡೆಸುತ್ತಿದೆ' ಎಂದು ಇದೇ ವೇಳೆ ತಿಳಿಸಿದರು. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ  

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News