ಎಸಿಬಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಆಪ್ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರ ವಿರುದ್ಧ ಪ್ರಕರಣ

Update: 2022-09-18 11:01 GMT
Photo:ANI

ಹೊಸದಿಲ್ಲಿ: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳಿಗೆ ಸರಕಾರಿ ಕೆಲಸ ನಿರ್ವಹಿಸಲು ಅಡ್ಡಿಪಡಿಸಿದ ಆರೋಪದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರ ವಿರುದ್ಧ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರಕಾರಿ ಕೆಲಸ ನಿರ್ವಹಿಸಲು ಅಡ್ಡಿಪಡಿಸಿದವರನ್ನು  ಗುರುತಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 16 ರಂದು ಜಾಮಿಯಾ ನಗರದಲ್ಲಿರುವ ಎಎಪಿ ಶಾಸಕರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ ಸಂದರ್ಭದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್(Aam Aadmi Party (AAP) MLA Amanatullah Khan) ಬೆಂಬಲಿಗರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ದಿಲ್ಲಿ ವಕ್ಫ್ ಬೋರ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳವು ಶುಕ್ರವಾರ ಬಂಧಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News