VIDEO- ತೆಲಂಗಾಣದಲ್ಲಿ 40 ಪರ್ಸೆಂಟ್ ಬ್ಯಾನರ್ ಅಳವಡಿಕೆ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-09-18 10:22 GMT
photo- twitter@KeypadGuerilla

ಬೆಂಗಳೂರು: 'ತೆಲಂಗಾಣದಲ್ಲಿ 40 ಪರ್ಸೆಂಟ್ ಬ್ಯಾನರ್ ಹಾಕಿರುವ ಬಗ್ಗೆ ನನಗೆ ಗೊತ್ತಿಲ್ಲ ಇದೊಂದು ವ್ಯವಸ್ಥಿತ ಷಡ್ಯಂತ್ರ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುವುದು' ಎಂದು ತಿಳಿಸಿದರು.

ಇದನ್ನೂ ಓದಿ: 40 ಪರ್ಸೆಂಟ್ ಕಮಿಷನ್ ಸಿಎಂಗೆ ಸುಸ್ವಾಗತ’: ಬ್ಯಾನರ್ ಹಾಕಿ ಕರ್ನಾಟಕ ಮುಖ್ಯಮಂತ್ರಿ ಗುರಿಯಾಗಿಸಿದ ಟಿಆರ್ ಎಸ್

'ಎಲ್ಲದಕ್ಕೂ ರಾಜಕಾರಣ ಸಲ್ಲದು': ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಆಗ ಅಂದಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು.

'ಎಲ್ಲದಕ್ಕೂ ರಾಜಕಾರಣ ಮಾಡುವ ಪ್ರವೃತ್ತಿ ಕಾಂಗ್ರೆಸ್ ನದ್ದು' ಎಂದು ನುಡಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News