×
Ad

ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಾಹಿದ್ ಅಲಿ ಆಯ್ಕೆ

Update: 2022-09-18 17:45 IST
ಶಾಹಿದ್ ಅಲಿ

ಉಡುಪಿ, ಸೆ.18: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿಯ 2022-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ನಡೆಯಿತು.

ನೂತನ ಜಿಲ್ಲಾಧ್ಯಕ್ಷರಾಗಿ ಬಿ.ಎನ್.ಶಾಹಿದ್ ಅಲಿ, ಉಪಾಧ್ಯಕ್ಷರಾಗಿ ಪಿ. ಖಲೀಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಶ್ರಫ್ ಭಾವ, ಜಿಲ್ಲಾ ಕಾರ್ಯದರ್ಶಿಗಳಾಗಿ ಅಬ್ದುಲ್ ಮಜೀದ್ ಉಚ್ಚಿಲ ಹಾಗೂ ಅಬ್ದುಲ್ ವಾಹಿದ್ ಮತ್ತು ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಮಲ್ಪೆ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News