×
Ad

ಮೈಸೂರು ವಿಭಾಗ ಮಟ್ಟದ ದಸರ ಕ್ರೀಡಾಕೂಟ ಉದ್ಘಾಟನೆ

Update: 2022-09-18 19:39 IST

ಉಡುಪಿ, ಸೆ.18: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಜಾದಿ ಕಾ ಅಮೃತಾ ಮಹೋತ್ಸವದ ಅಂಗವಾಗಿ ಮೈಸೂರು ವಿಭಾಗ ಮಟ್ಟದ ದಸರ ಕ್ರೀಡಾಕೂಟವು ರವಿವಾರ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜರಗಿತು.

ಕ್ರೀಡಾಕೂಟವನ್ನು ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ವಹಿಸಿದ್ದರು.

ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ತಾಲೂಕು ಕ್ರೀಡಾಧಿಕಾರಿ ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಈ ಕ್ರೀಡಾಕೂಟದಲ್ಲಿ ಮೈಸೂರು, ಜಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮಡಿಕೇರಿ, ಉಡುಪಿ, ದ.ಕ. ಜಿಲ್ಲೆಗಳಿಂದ ಸುಮಾರು 600ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು. ಫುಟ್ಬಾಲ್, ಸ್ವಿಮ್ಮಿಂಗ್,  ಬಾಕ್ಸಿಂಗ್, ಟೆನ್ನಿಸ್ ಕ್ರೀಡೆಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News