ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿಸಲು ರಾಜಸ್ಥಾನ ಕಾಂಗ್ರೆಸ್‌ನಿಂದ ನಿರ್ಣಯ ಅಂಗೀಕಾರ
Update: 2022-09-18 21:53 IST
ಜೈಪುರ, ಸೆ. ೧೮: ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‌ನ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲು ರಾಜಸ್ಥಾನ ಕಾಂಗ್ರೆಸ್ ಶನಿವಾರ ಔಪಚಾರಿಕ ನಿರ್ಣಯ ಅಂಗೀಕರಿಸಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಿರ್ಣಯ ಮಂಡಿಸಿದರು. ಇದಕ್ಕೆ ಪ್ರತಿಯೊಬ್ಬರೂ ಬೆಂಬಲಿಸಿದರು ಎಂದು ರಾಜಸ್ಥಾನ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಪ್ರತಾಪ್ ಸಿಂಗ್ ಕಚಾರಿಯಾ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಸೆ. 24ರಿಂದ ಸೆ. 30ರ ವರೆಗೆ ಅವಕಾಶ ಇದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅನಂತರ ಎರಡು ದಿನಗಳ ಬಳಿಕ ಫಲಿತಾಂಶ ಘೋಷಣೆಯಾಗಲಿದೆ.