ನೇಪಾಳ: ಹಲವೆಡೆ ಭೂಕುಸಿತ; 22 ಮಂದಿ ಮೃತ್ಯು

Update: 2022-09-18 18:07 GMT
PHOTO: PTI

ಕಠ್ಮಂಡು, ಸೆ.18: ನೇಪಾಳದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದು ಕನಿಷ್ಟ 22 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದು ಮಣ್ಣಿನಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ರವಿವಾರ ಹೇಳಿದ್ದಾರೆ.

ಕಠ್ಮಂಡುವಿನ ಸುಮಾರು 450 ಕಿ.ಮೀ ಪಶ್ಚಿಮದಲ್ಲಿರುವ ಅಚ್ಚಾಮ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು ರಕ್ಷಣೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದೆ. ನೆರೆಯ ಕೈಲಾಲಿ ಜಿಲ್ಲೆಯಲ್ಲಿ ಹರಿಯುವ ಗೆಟಾ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಮೀನುಗಾರನ ಮೃತದೇಹವನ್ನು ಪತ್ತೆಹಚ್ಚಲಾಗಿದೆ. ಈ ಪ್ರದೇಶದಲ್ಲಿ ಸುಮಾರು 1,500 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಹಲವೆಡೆ ರಸ್ತೆಗಳು ಹಾಗೂ ಸೇತುವೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News