ಸತ್ಯೇಂದ್ರ ಜೈನ್ ವಿರುದ್ಧ ಪ್ರಕರಣ: ವಿಚಾರಣೆಗೆ ತಡೆ ನೀಡಿದ ದಿಲ್ಲಿ ನ್ಯಾಯಾಲಯ

Update: 2022-09-19 09:45 GMT
Photo:PTI

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ (Satyendar Jain)ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ದಿಲ್ಲಿ ನ್ಯಾಯಾಲಯ ಸೋಮವಾರ ತಡೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರನ್ನು ಬದಲಿಸುವಂತೆ ಮಾಡಿದ ಮನವಿಯ ಮೇರೆಗೆ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ದಿಲ್ಲಿ ಸರಕಾರದಲ್ಲಿ ಯಾವುದೇ ಖಾತೆಯಿಲ್ಲದ ಸಚಿವ ಜೈನ್ ಅವರನ್ನು ಮೇ 30 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ2017 ರಲ್ಲಿ ಕೇಂದ್ರ ತನಿಖಾ ದಳವು ಸಲ್ಲಿಸಿದ ಅಸಮಂಜಸ ಆಸ್ತಿಯ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು.

ತನ್ನೊಂದಿಗೆ ನಂಟು ಹೊಂದಿರುವ ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಜೈನ್ ಅವರ ಮೇಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News