ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿಗಳ ಆಯ್ಕೆ
Update: 2022-09-19 18:30 IST
ಉಡುಪಿ, ಸೆ.19: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ನೀಡಲಾಗುವ ‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ- 2022ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಎಚ್.ದಂಡಪ್ಪ(ವಿಮರ್ಶಕರು), ಮಂಗಳೂರಿನ ಡಾ.ರತಿದೇವಿ ಆರ್.(ವೈದ್ಯಕೀಯ ಸಾಹಿತ್ಯ), ಉಡುಪಿಯ ಎಚ್.ಗೋಪಾಲ ಭಟ್ಟ(ಸಾಹಿತ್ಯ ಪರಿವ್ರಾಜಕ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.