×
Ad

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Update: 2022-09-19 19:19 IST

ಉಡುಪಿ, ಸೆ.19: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆ ಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆ.21ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22ರಂದು ಕುಂದಾಪುರ ಪ್ರವಾಸಿಮಂದಿರ, ಸೆ.23ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ.26ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27ರಂದು ಬ್ರಹ್ಮಾವರ ತಾಲೂಕು ಕಚೇರಿ ಆವರಣ ಹಾಗೂ ಸೆ.28ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧ ಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದು. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661ಅನ್ನು ಸಂಪರ್ಕಿಸ ಬಹುದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News