ಹಿರಿಯಡ್ಕ: ಗ್ರಾಮ ಒನ್ ಸೆಂಟರ್‌ನಲ್ಲಿ ಅಭಾ ನೊಂದಣಿ
Update: 2022-09-19 19:25 IST
ಉಡುಪಿ, ಸೆ.19: ಬೊಮ್ಮರಬೆಟ್ಟು ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಒನ್ ಸೆಂಟರ್‌ನಲ್ಲಿ ಆಭಾ (ಎಬಿಹೆಚ್‌ಎ) ನೋಂದಣಿಯನ್ನು ಸೋಮವಾರ ನಡೆಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.