ಚಾರ್ಜ್‍ಶೀಟ್ ಬಳಿಕ ಪಿಎಸ್ಸೈ ಮರುಪರೀಕ್ಷೆ: ಡಿಜಿಪಿ ಪ್ರವೀಣ್ ಸೂದ್

Update: 2022-09-19 15:05 GMT
ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು, ಸೆ.19: ಪಿಎಸ್ಸೈ(PSI) ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ತನಿಖೆ ಮುಂದುವರೆದಿದ್ದು, ಚಾರ್ಜ್‍ಶೀಟ್ ಸಲ್ಲಿಸಿದ ಬಳಿಕ ಮರು ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್(Praveen Sood) ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದ್ದು, ಚಾರ್ಚ್‍ಶೀಟ್ ಆಗುವವರೆಗೂ ಯಾವುದೇ ರೀತಿಯ ಹೇಳಿಕೆ ನೀಡಲು ಸಾಧ್ಯವಿಲ್ಲ. ಚಾರ್ಚ್‍ಶೀಟ್ ಬಳಿಕವೇ ಪರೀಕ್ಷೆ ನಡೆಯಲಿದೆ ಎಂದರು.

ಕಳಂಕಿತರು ಮತ್ತೆ ಪರೀಕ್ಷೆ ಬರೆಯಬಾರದು. ತಪ್ಪಿತಸ್ಥ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ದೊರೆಯಬಾರದು. ಹೀಗಾಗಿಯೇ, ಸದ್ಯಕ್ಕೆ ಪರೀಕ್ಷೆ ದಿನಾಂಕ ಪ್ರಕಟಿಸಿಲ್ಲ. ಇನ್ನೆರಡು ತಿಂಗಳಲ್ಲಿ ಸಿಐಡಿ ಚಾರ್ಜ್‍ಶೀಟ್ ಸಲ್ಲಿಸಿದ ಬಳಿಕ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News