ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ಜಗದೀಸನ್ ಸಕ್ರಿಯ ರಾಜಕಾರಣದಿಂದ ನಿವೃತ್ತಿ

Update: 2022-09-20 05:15 GMT
Source: Twitter/@SubbulakshmiJa2

ಚೆನ್ನೈ: ಮಾಜಿ ಕೇಂದ್ರ ಸಚಿವೆ ಹಾಗೂ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ಜಗದೀಸನ್ (DMK's deputy general secretary Subbulakshmi Jagadeesan) ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ತಾನು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ.

14 ನೇ ಲೋಕಸಭೆಯ ಸದಸ್ಯೆಯಾಗಿದ್ದ ಜಗದೀಸನ್ ದ್ರಾವಿಡ ಮುನ್ನೇತ್ರ ಕಳಗಂ (DMK) ಸದಸ್ಯರಾಗಿ ತಮಿಳುನಾಡಿನ ತಿರುಚೆಂಗೋಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ಕೇಂದ್ರ ಸರಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿದ್ದರು.

ಜಗದೀಸನ್ ಅವರು 1977-1980 ರ ಅವಧಿಯಲ್ಲಿ ತಮಿಳುನಾಡಿನ ಜವಳಿ, ಖಾದಿ, ಕೈಮಗ್ಗ, ಸಣ್ಣ-ಪ್ರಮಾಣದ ಕೈಗಾರಿಕೆಗಳು, ಅಬಕಾರಿ ಸಚಿವಾಲಯದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು.

1989 ರಿಂದ 1991 ರವರೆಗೆ ಅವರು ತಮಿಳುನಾಡಿನ ಸಮಾಜ ಕಲ್ಯಾಣ ಸಚಿವಾಲಯದಲ್ಲಿ ಸಚಿವರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News