ನೋಯ್ಡಾ ಅಪಾರ್ಟ್‌ಮೆಂಟ್ ಕಟ್ಟಡದ ಆವರಣ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತ್ಯು
ಹೊಸದಿಲ್ಲಿ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿ ಸೊಸೈಟಿಯೊಂದರ ಆವರಣ ಗೋಡೆ ಕುಸಿದ ಪರಿಣಾಮ (Noida Apartment Building's Boundary Wall Collapses)ನಾಲ್ವರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು NDTV ವರದಿ ಮಾಡಿದೆ.
ನೊಯ್ಡಾದ ಸೆಕ್ಟರ್ 21 ರಲ್ಲಿರುವ ದೊಡ್ಡ ವಸತಿ ಸಂಕೀರ್ಣವಾದ ಜಲ ವಾಯು ವಿಹಾರ್‌ನಲ್ಲಿ ಬುಲ್‌ಡೋಝರ್‌ಗಳನ್ನು ಬಳಸಿ ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಹೊರತೆಗೆಯಲಾಯಿತು.
"ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಆರಂಭಿಸಲಾಗಿದೆ. ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದಾರೆ" ಎಂದು ಘಟನೆಯ ನಂತರ ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ PTI ವರದಿ ಮಾಡಿದೆ.
ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗೋಡೆ ಕುಸಿತದ ಬಗ್ಗೆ ಮಾಹಿತಿ ಪಡೆದ ಅವರು, ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ತಲುಪಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯವನ್ನು ಆರಂಭಿಸುವಂತೆ ಕೇಳಿಕೊಂಡರು ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.
ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ