ಅಲ್ಪಸಂಖ್ಯಾತ ಇಲಾಖೆಯಿಂದ 'ವಿದ್ಯಾಸಿರಿ' 2022-23 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2022-09-20 08:32 GMT

ಬೆಂಗಳೂರು: 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಅಲ್ಪ ಸಂಖ್ಯಾತರ ನಿರ್ದೇಶನಾಲಯ ಪ್ರಕಟೆನೆಯನ್ನು ಹೊರಡಿಸಿದೆ.  

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಯಾವುದೇ ಇಲಾಖೆಯ ಸರ್ಕಾರಿ/ಅನುದಾನಿತ ವಿದ್ಯಾರ್ಥಿನಿಲಯ ಹಾಗೂ ವಸತಿ ಕಾಲೇಜುಗಳಲ್ಲಿ. ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಲಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್‌ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು. ಈ ಸೌಲಭ್ಯವನ್ನು ಪಡೆದಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

►  ಅರ್ಜಿ ಸಲ್ಲಿಸಲು ಆರಂಭ ದಿನಾಂಕ - 19-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 20-10-2022

ಆಸಕ್ತ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ:-8277799990 ಇಲಾಖಾ  Website:  https://dom.karnataka.gov.in/ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News