ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಬಿ.ಎಸ್. ಯಡಿಯೂರಪ್ಪ

Update: 2022-09-20 13:59 GMT

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. 

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ  ಅವರು ದೇವೇಗೌಡರ ಪದ್ಮನಾಭ ನಗರದ ನಿವಾಸದಕ್ಕೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು. 

ಈ ವೇಳೆ ಡಿ.ಎನ್. ಜೀವರಾಜ್, ವಿಶ್ವನಾಥ್, ಎಂ.ಕೃಷ್ಣಪ್ಪ  ಉಪಸ್ಥಿತರಿದ್ದರು.

ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News