ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ: ಅವಧಿ ವಿಸ್ತರಣೆ

Update: 2022-09-20 15:22 GMT

ಉಡುಪಿ, ಸೆ.20: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 22ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂಖ್ಯೆ:080-22374832, 9606066389 ಅಥವಾ 0820-2574882ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News