ಕರಾವಳಿ ಕಾವಲು ಪಡೆಗೆ ಹೆಚ್ಚಿನ ಸೌಲಭ್ಯಕ್ಕೆ ಶಾಸಕ ರಘುಪತಿ ಭಟ್ ಒತ್ತಾಯ
Update: 2022-09-20 20:54 IST
ಉಡುಪಿ, ಸೆ.20: ಕರಾವಳಿಯ ಸಮುದ್ರದಲ್ಲಿ ಗಸ್ತು ತಿರುಗುವ ಕರಾವಳಿ ಕಾವಲು ಪಡೆಗೆ ಹೆಚ್ಚಿನ ಸಿಬ್ಬಂದಿ ಗಳನ್ನು ನಿಯೋಜಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಅತ್ಯಾಧುನಿಕ, ಸುಸಜ್ಜಿತವಾದ ಬೋಟ್, ಡ್ರೋನ್ ಕೆಮರಾ, ಲೈಫ್ ಜಾಕೆಟ್ ಸೇರಿದಂತೆ ಹೆಚ್ಚಿನ ಸೌಲಭ್ಯ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಅಧಿವೇಶದಲ್ಲಿ ಮಂಗಳವಾರ ವಿಷಯ ಪ್ರಸ್ತಾಪಿಸಿ ಮಾತನಾಡಿದ ರಘುಪತಿ ಭಟ್, ಸಮುದ್ರ ಮಾರ್ಗದ ಕಳ್ಳಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಹಾಗೂ ಬೇರೆ ರಾಜ್ಯದವರು ನಮ್ಮ ರಾಜ್ಯ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸದಂತೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡು ನಮ್ಮ ಮೀನುಗಾರರ ಹಿತರಕ್ಷಣೆ ಮಾಡುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರನ್ನು ಆಗ್ರಹಿಸಿದರು.