ಕಳೆದ ಮೂರು ವರ್ಷದಲ್ಲಿ 15 ಕೈಗಾರಿಕೆಗಳು ಮುಚ್ಚಿವೆ: ಸಚಿವ ಮುರುಗೇಶ್ ನಿರಾಣಿ

Update: 2022-09-20 16:17 GMT

ಬೆಂಗಳೂರು, ಸೆ.20: ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ವಿವಿಧ ಕಾರಣಗಳಿಂದ 15 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. 

ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಕ್ಷಿಣ ಕನ್ನಡ, ಗದಗ, ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 15 ಕಾರ್ಖಾನೆಗಳು ಮುಚ್ಚಿವೆ. ಇದರಿಂದ ಇವುಗಳಲ್ಲಿ ಕೆಲಸ ಮಾಡುತ್ತಿದ್ದ 2086 ಮಂದಿ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News