ಪಂಜಾಬ್ ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಬೃಹತ್ ಪ್ರತಿಭಟನೆ

Update: 2022-09-21 07:11 GMT
Photo: ANI Tweet photo

ಪಂಜಾಬ್: ಪಂಜಾಬ್ (Punjab) ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಬೃಹತ್ ಪ್ರತಿಭಟನೆಗಳು ಭುಗಿಲೆದ್ದವು ಹಾಗೂ  ವಿದ್ಯಾರ್ಥಿಗಳು ತನಿಖೆಗೆ ಒತ್ತಾಯಿಸಿ ಮಂಗಳವಾರ ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದರು.

ಫಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ 10 ದಿನಗಳಲ್ಲಿ ಆತ್ಮಹತ್ಯೆ ಮೂಲಕ ಸಾವನ್ನಪ್ಪಿರುವ  ಎರಡನೇ ಘಟನೆ ಇದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕೇರಳದ 21 ವರ್ಷದ ಅಗ್ನಿ ಎಸ್. ದಿಲೀಪ್, ವಿಶ್ವವಿದ್ಯಾನಿಲಯದಲ್ಲಿ ಡಿಸೈನ್ ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, "ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತನ್ನ ಡೆತ್ ನೋಟ್ ನಲ್ಲಿ ಬರೆದಿದ್ದಾನೆ ಎಂದು  ಪೊಲೀಸರು ತಿಳಿಸಿದ್ದಾರೆ.

" ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿನ ಬಿ. ಡಿಸೈನ್‌ನ ಪ್ರಥಮ ವರ್ಷದ ವಿದ್ಯಾರ್ಥಿ ಮಂಗಳವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕವಾಗಿ ವಿದ್ಯಾರ್ಥಿ ಕೆಲವು ವೈಯಕ್ತಿಕ ಸಮಸ್ಯೆಗಳನ್ನು ಹೊಂದಿದ್ದರು ಎನ್ನವುದು ಅವರು ಬಿಟ್ಟುಹೋದ ಡೆತ್ ನೋಟ್  ಸೂಚಿಸುತ್ತಿದೆ" ಎಂದು ಕಪುರ್ತಲಾದಲ್ಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ವಿಶ್ವವಿದ್ಯಾಲಯ ಇದೇ ಕಾರಣ ನೀಡಿ ಹೇಳಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News