ಬೆಂಗಳೂರು: ಸಿಎಂ ಬೊಮ್ಮಾಯಿ ಚಿತ್ರ ಇರುವ 'PAYCM' ಪೋಸ್ಟರ್ ಪ್ರತ್ಯಕ್ಷ !

Update: 2022-09-21 16:43 GMT
photo - twitter 

ಬೆಂಗಳೂರು: ನಗರದ ಹಲವೆಡೆ 'ಪೇ-ಸಿಎಂ' ಪೋಸ್ಟರ್ ಪ್ರತ್ಯಕ್ಷಗೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. 

ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್​ ಕಮಿಷನ್​​ ಆರೋಪಕ್ಕೆ ಸಂಬಂಧಿಸಿ ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ‘ಪೇ ಸಿಎಂ’ ಪೋಸ್ಟರ್‌ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ ಬಳಿ ಈ  ಪೋಸ್ಟರ್‌ ಕಾಣಿಸಿಕೊಂಡಿದೆ.

ಇತ್ತೀಚೆಗಷ್ಟೇ ತೆಲಂಗಾಣದ ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ, ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ವ್ಯಂಗ್ಯವಾಡಿತ್ತು.

ಕ್ರಮ ಕೈಗೊಳ್ಳುತ್ತೇವೆ: ಪ್ರತಾಪ್‍ರೆಡ್ಡಿ

ಬಿಬಿಎಂಪಿ ನೀಡಿರುವ ದೂರಿನನ್ವಯ ಸದ್ಯ ಪೋಸ್ಟರ್ ಅಂಟಿಸಿದವರ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ಮಾಹಿತಿ ನೀಡಿದ್ದಾರೆ.


 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News