'PAYCM' ಪೋಸ್ಟರ್ ಅಭಿಯಾನ: ನನ್ನ ಹಾಗೂ ರಾಜ್ಯದ ಹೆಸರು ಕೆಡಿಸಲು ಷಡ್ಯಂತ್ರ ಎಂದ ಸಿಎಂ ಬೊಮ್ಮಾಯಿ

Update: 2022-09-21 11:59 GMT

ಬೆಂಗಳೂರು: 'ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಕಾಂಗ್ರೆಸ್‌ ಷಡ್ಯಂತ್ರ ನಡೆಸಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್‌. ಡಿ. ದೇವೇಗೌಡ ಅವರನ್ನು ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ' ಎಂದು ತಿಳಿಸಿದರು.. 

ಇನ್ನು ನಗರದ ಹಲವೆಡೆ ಅಳವಡಿಸಿದ್ದ  'PayCM' ಪೋಸ್ಟರ್‌ ಅನ್ನು ತೆರವುಗೊಳಿಸಿರುವ ಪೊಲೀಸರು,  ಎಫ್‌ಐಆರ್‌ ದಾಖಲಿಸಿಕೊಂಡು ಪೋಸ್ಟರ್ ಅಂಟಿಸಿದವರ ಪತ್ತೆಗೆ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News