×
Ad

ಮಂಗಳೂರು: ಎಂಡಿಎಂಎ ಸಾಗಾಟ, ಮಾರಾಟ ಪ್ರಕರಣ; ವಿದೇಶಿ ಪ್ರಜೆಯ ಬಂಧನ

Update: 2022-09-21 17:41 IST

ಮಂಗಳೂರು, ಸೆ.21: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ- ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತ: ರಿಪಬ್ಲಿಕ್ ಆಫ್ ಸೌತ್ ಸೂಡನ್‌ನ ನಿವಾಸಿ,  ಹಾಲಿ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸವಿದ್ದ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ ಡ್ಯಾನಿ ಎಂದು ಗುರುತಿಸಲಾಗಿದೆ.

2022ರ ಜೂನ್ 15ರಂದು ಸಿಸಿಬಿ ಪೊಲೀಸರು ಪಡೀಲ್ ಬಳಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ಕು ಜನರನ್ನು ದಸ್ತಗಿರಿ ಮಾಡಿ 125 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು. ತನಿಖೆ ಮುಂದುವರಿಸಿದ್ದ ಸೆನ್ ಕ್ರೈ ಪೊಲೀಸರು ಈ ಹಿಂದೆ ಆರೋಪಿಗಳಿಗೆ ಮಾದಕ ವಸ್ತುವನ್ನು ಮಾರಾಟ ಮಾಡಿದ್ದ ಆರೋಪಿ ಡ್ಯಾನಿಯನ್ನು ಬೆಂಗಳೂರಿನಲ್ಲಿ ಇಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News