×
Ad

ಮಾಣಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Update: 2022-09-21 19:41 IST

ಉಡುಪಿ, ಸೆ.21:  ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ. ತಲುಪಿದೆ.

ಜಲಾಶಯಕ್ಕೆ ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಅಣೆಕಟ್ಟಿನ  ಸುರಕ್ಷತೆಯ ದೃಷ್ಟಿಯಿಂದ  ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News