ಮನೆಗೆ ದಾಳಿ: ಗೋದಾಮಿನಲ್ಲಿರಿಸಿದ್ದ ಅನ್ನಭಾಗ್ಯದ ಅಕ್ಕಿ ವಶ

Update: 2022-09-21 14:45 GMT
ಸಾಂದರ್ಭಿಕ ಚಿತ್ರ

ಪಡುಬಿದ್ರಿ, ಸೆ.21: ಇಲ್ಲಿನ ಕನ್ನಂಗಾರ್ ಎಂಬಲ್ಲಿರುವ ಮನೆಯೊಂದರ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಅನ್ನಭಾಗ್ಯದ ಅಕ್ಕಿ ಯನ್ನು ಆಹಾರ ನಿರೀಕ್ಷಕರ ನೇತೃತ್ವದ ತಂಡ ಸೆ.20ರಂದು ವಶಪಡಿಸಿಕೊಂಡಿದೆ.

ಕಾಪು ತಾಲೂಕು ಆಹಾರ ನಿರೀಕ್ಷಕ ಟಿ.ಲೀಲಾನಂದ ನೇತೃತ್ವದಲ್ಲಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಎಸ್ಸೈ ಪ್ರಕಾಶ್ ಸಾಲ್ಯಾನ್ ಹಾಗೂ ಸಿಬ್ಬಂದಿ ಕನ್ನಂಗಾರಿನ ಮೊಹಮದ್ ಶಫೀಕ್ ಎಂಬವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಅನ್ನಭಾಗ್ಯ ಯೋಜನೆಯ 1650 ಕೆ.ಜಿ ಬೆಳ್ತಿಗೆ ಅಕ್ಕಿ, 1583 ಕೆ.ಜಿ. ತೂಕದ ಕುಚಲಕ್ಕಿ  ಸೇರಿದಂತೆ ಒಟ್ಟು 2,87,606ರೂ. ಮೌಲ್ಯದ 13,073 ಕೆ.ಜಿ. ಅಕ್ಕಿ, 4,000 ರೂ. ಮೌಲ್ಯದ ತೂಕದಯಂತ್ರ, 5,000ರೂ. ಮೌಲ್ಯದ ಚೀಲ ಹೊಲಿಯುವ ಯಂತ್ರವನ್ನು ವಶಪಡಿಸಿಕೊಳ್ಳಲಾ ಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News