ನಾರಾಯಣಗುರು ನಿಗಮ ಸ್ಥಾಪನೆಯ ಬೇಡಿಕೆ ಪರಿಶೀಲನೆ: ಸಮಾಜ ಕಲ್ಯಾಣ ಸಚಿವರಿಂದ ವಿಧಾನಸಭೆಯಲ್ಲಿ ಉತ್ತರ

Update: 2022-09-21 15:19 GMT
ನಾರಾಯಣಗುರು

ಉಡುಪಿ, ಸೆ.21: ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ ಸ್ಥಾಪಿಸುವ ಬಗ್ಗೆ ಸಮುದಾಯದಿಂದ ಬೇಡಿಕೆ ಇದ್ದು, ಇದು ಸರಕಾರದ ಪರಿಶೀಲನೆಯಲ್ಲಿದೆ ಎಂದು ಶಾಸಕ ರಘುಪತಿ ಭಟ್ ಸದನದಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸರಕಾರ ನೀಡಿದ  ಲಿಖಿತ ಉತ್ತರದಲ್ಲಿ ತಿಳಿಸಲಾಗಿದೆ.

ಬಿಲ್ಲವ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೇರಿದಂತೆ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಬ್ರಹ್ಮಶ್ರೀ ನಾರಾಯಣಗುರು ನಿಗಮ ಸ್ಥಾಪಿಸುವ ಕುರಿತು ಮಂಗಳವಾರ ಕೆ.ರಘುಪತಿ ಭಟ್ ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಪ್ರಸ್ತಾಪಿಸಿದ್ದರು.

ಇದಕ್ಕೆ ಲಿಖಿತ ಉತ್ತರ ನೀಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸುವ ಬಗ್ಗೆ ಸಮುದಾಯದಿಂದ  ಬೇಡಿಕೆಯಿದ್ದು ಇದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

ಸದನದಲ್ಲಿ ವಿರೋಧ ಪಕ್ಷ ನಿಯಮ 69ರಲ್ಲಿ ಮಂಡಿಸಿದ ಪೊಲೀಸ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ವಿಷಯ ಚರ್ಚೆಯಿಂದ ಸದನದಲ್ಲಿ ಗದ್ದಲ ಉಂಟಾಗಿ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಗೊಂದಲ ಉಂಟಾಗಿದ್ದರಿಂದ ಈ ವಿಷಯದ ಬಗ್ಗೆ ಚರ್ಚೆ ಅಸಾಧ್ಯವಾಗಿ ಸರಕಾರ ಸದನಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News