ಪಡುಬಿದ್ರೆ ಗ್ರಾ.ಪಂ. ಮಾಜಿ ಸದಸ್ಯ ಹಾಜಿ ಉಮರ್ ಫಾರೂಕ್ ನಿಧನ

Update: 2022-09-22 03:10 GMT

ಪಡುಬಿದ್ರೆ: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ.ಉಮರ್ ಫಾರೂಕ್ (60) ಅಲ್ಪಕಾಲದ‌ ಅನಾರೋಗ್ಯದಿಂದ ನಿಧನ ಹೊಂದಿದರು.

ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತಿದ್ದ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ, ಪಡುಬಿದ್ರೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾಧ್ಯಕ್ಷರಾಗಿ, ಎಸ್ ವೈಎಸ್ ಪಡುಬಿದ್ರೆ ಘಟಕದ ಮಾಜಿ ಅಧ್ಯಕ್ಷರಾಗಿ, ಪಡುಬಿದ್ರೆ ಜುಮಾ ಮಸೀದಿ ಸದಸ್ಯರಾಗಿ, ಇ ಅನತುಲ್ ಮಸಾಕೀನ್ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News