ಶಿವಮೊಗ್ಗದಲ್ಲಿ ಎಟಿಸಿ ದಾಳಿ: ಪಿಎಫ್ ಐ ಮುಖಂಡ ವಶಕ್ಕೆ

Update: 2022-09-22 06:12 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಸೆ.22: ಶಿವಮೊಗ್ಗದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)  ಮುಖಂಡರೊಬ್ಬರ ಮನೆ ಮೇಲೆ ರಾಜ್ಯ ಎಟಿಸಿ(Anti Terrorism Cell) ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದುಕೊಂಡಿದ್ದಾರೆ.

 ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿರುವ ಪಿಎಫ್ಐ ಮುಖಂಡ ಶಾಹೀದ್ ಖಾನ್ ಎಂಬವರ ಮನೆಯ ಮೇಲೆ ಇಂದು ಬೆಳಗ್ಗೆ ಎಟಿಸಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

 ಶಾಹಿದ್ ಖಾನ್ ಪಿಎಫ್ಐ ಪ್ರಾದೇಶಿಕ ವಲಯದ ಅಧ್ಯಕ್ಷರಾಗಿದ್ದಾರೆ.

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದರೆನ್ನಲಾಗಿದೆ. ಆ ಆರೋಪಿಗಳಿಗೆ ಸಹಕರಿಸಿದ ಆರೋಪದಡಿಯಲ್ಲಿ ದಾಳಿ ನಡೆಸಿರುವ ರಾಜ್ಯ ಎಟಿಸಿ ಅಧಿಕಾರಿಗಳು ಶಾಹಿದ್ ಖಾನ್ ರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News