ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಅಲ್ಪ ಸಂಖ್ಯಾತರು- ಬಹುಸಂಖ್ಯಾತರಲ್ಲ: ಸಚಿವ ಆರಗ ಜ್ಞಾನೇಂದ್ರ

Update: 2022-09-22 07:45 GMT

ಬೆಂಗಳೂರು, ಸೆ. 22: ಪೋಲೀಸರು  ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ,  ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ, ಅಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, 'ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ ಎಲ್ಲರೂ ಸಹಕರಿಸಬೇಕು' ಎಂದು ಹೇಳಿದರು.

'ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದ ಸಚಿವರು, ಖಚಿತ ಮಾಹಿತಿ ಮೇರೆಗೆ NIA  ಸಿಬ್ಬಂದಿಗಳು ಹಲವು ಕಡೆ ಶೋಧ ನಡೆಸಿದ್ದಾರೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ನಡೆಸುತ್ತಿರುವ 'ಪೇಸಿಎಮ್' ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, 'ಜನರು ಪಕ್ಷದಿಂದ  ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ' ಎಂದರು.

ಕಾಂಗ್ರೆಸ್ ಪಕ್ಷದ ನಾಯಕರೂ ಮಾಜಿ ವಿಧಾನ ಸಭಾ ಸ್ಪೀಕರ್ ಸಹ ಆಗಿದ್ದ, ಕಾಂಗ್ರೆಸ್ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು, ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News