×
Ad

ಉಡುಪಿ: ಪಿಎಫ್‌ಐ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ; ಪೊಲೀಸರಿಂದ ಲಘು ಲಾಠಿಚಾರ್ಜ್

Update: 2022-09-22 18:08 IST

ಉಡುಪಿ, ಸೆ.22: ಪಿಎಫ್‌ಐ ಕಚೇರಿ ಮೇಲಿನ NIA ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಪಿಎಫ್‌ಐ ಕಾರ್ಯಕರ್ತರು ಇಂದು ಸಂಜೆ ಉಡುಪಿ ನಗರದ ಹಳೆ ಡಯನಾ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪೊಲೀಸರಿಂದ ಅನುಮತಿ ಪಡೆಯದೆ ಏಕಾಏಕಿ ರಸ್ತೆಯನ್ನು ತಡೆದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು ಎಂದು ದೂರಲಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ಚದುರಿಸಿದರು.

ಬಳಿಕ ನಾಲ್ಕೈದು ಮಂದಿ ಪಿಎಫ್‌ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಉಡುಪಿ ಡಿವೈಎಸ್ಪಿ ಸದಾನಂದ ನಾಯ್ಕ್, ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News