ಸೆ.23ರಂದು ಪೌರಕಾರ್ಮಿಕರ ದಿನಾಚರಣೆ
Update: 2022-09-22 20:31 IST
ಉಡುಪಿ, ಸೆ.22: ಉಡುಪಿ ನಗರಸಭೆಯ ವತಿಯಿಂದ ಸೆ.23ರ ಶುಕ್ರವಾರ ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಪುರಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಆರ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲ್ಯಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.