ಚಿಕ್ಕಮಗಳೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ

Update: 2022-09-23 06:54 GMT

ಚಿಕ್ಕಮಗಳೂರು, ಸೆ.23: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಹನುಮಂತಪ್ಪ ವೃತ್ತದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ವರದಿಯಾಗಿದೆ. ಇದನ್ನು ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಫ್ಲೆಕ್ಸ್ ನಲ್ಲಿದ್ದ ಭಾವಚಿತ್ರದಲ್ಲಿ ಚಪ್ಪಲಿಯಲ್ಲಿ ತುಳಿದಿರುವ ಗುರುತು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳು ಧರಣಿ ಕುಳಿತರು.  

 ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News