370 ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

Update: 2022-09-23 10:13 GMT
Photo:PTI

ಹೊಸದಿಲ್ಲಿ: ಜಮ್ಮು-ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯದ ದಸರಾ ರಜೆಯ ನಂತರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್(Supreme Court) ಶುಕ್ರವಾರ ಹೇಳಿದೆ ಎಂದು Bar and Bench  ವರದಿ ಮಾಡಿದೆ.

"ನಾವು ಖಂಡಿತವಾಗಿಯೂ ಅದನ್ನು ಪಟ್ಟಿ ಮಾಡುತ್ತೇವೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಮುಂದೆ ವಿಷಯ ಪ್ರಸ್ತಾಪಿಸಿದಾಗ ಹೇಳಿದರು.

ಅಕ್ಟೋಬರ್ 3 ರಿಂದ ಅಕ್ಟೋಬರ್ 10 ರವರೆಗೆ ದಸರಾ ನಿಮಿತ್ತ ನ್ಯಾಯಾಲಯದಲ್ಲಿ ರಜೆ ಇರುತ್ತದೆ.

ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಹೊಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಆಗಸ್ಟ್ 5, 2019 ರಂದು 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ರಾಜ್ಯ ಸ್ಥಾನಮಾನ ಹಾಗೂ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News