ಬೆಳ್ತಂಗಡಿ: ಸರಕಾರದ ತಾರತಮ್ಯ ನೀತಿ ವಿರೋಧಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Update: 2022-09-23 13:16 GMT

ಬೆಳ್ತಂಗಡಿ: ಸರಕಾರದ ತಾರತಮ್ಯ ನೀತಿ ವಿರೋಧಿಸಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದಶೀಸಿ ಮಾತನಾಡಿದ ಮುಖಂಡರುಗಳು ರಾಜ್ಯ ಸರಕಾರ ಅನುಸರಿಸುತ್ತಿರುವ ತಾರತಮ್ಯ ನೀತಿಯ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು.

ಪ್ರತಿಭಟನೆಯ ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್ ಬೆಳ್ತಂಗಡಿ, ಸೈಯ್ಯದ್ ಅಕ್ರಂ ಅಲೀ ತಂಙಳ್, ಐ.ಕೆ.  ಮೂಸಾ ದಾರಿಮಿ ಕಕ್ಕಿಂಜೆ, ಬೆಳ್ತಂಗಡಿ ದಾರುಸ್ಸಲಾಂ ಶಿಕ್ಷಣ ಸಂಸ್ಥೆ ಪ್ರಧಾನ ಪ್ರಾಧ್ಯಾಪಕ ಇಸ್ಹಾಕ್ ಕೌಸರಿ, ಪೇರಾಲ್ದಕಟ್ಟೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ,  ಅಬ್ದುರ್ರಝಾಕ್ ಕನ್ನಡಿಕಟ್ಟೆ, ಗುರುವಾಯನಕೆರೆ ದುರ್ಗಾ ಸಮಿತಿ ಕಾರ್ಯದರ್ಶಿ ಉಮರ್ ಜಿ.ಕೆ., ಫಾಝಿಲ್ ಅವರ ತಂದೆ ಉಮರುಲ್ ಫಾರೂಕ್, ಬೆಳ್ತಂಗಡಿ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಇಸ್ಮಾಯಿಲ್ ಸಂಜಯನಗರ, ಜನಪರ ಚಳುವಳಿಗಾರ ದಮ್ಮಾನಂದ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಂಚಾಲಕ ಶೀಖರ್ ಲಾಯಿಲ ಉಪಸ್ಥಿತರಿದ್ದರು.

ನ್ಯಾಯವಾದಿ ನವಾಝ್ ಶರೀಫ್ ಕಕ್ಕಿಂಜೆ ಪ್ರಾಸ್ತಾವಿಸಿ ಸ್ವಾಗತಿಸಿದರು. ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಸದಸ್ಯ ತಲ್ಹತ್ ಎಂ.ಜಿ., ಮುಸ್ಲಿಂ ಒಕ್ಕೂಟ ಸದಸ್ಯ ಅಬ್ದುಲ್ ಖಾದರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News