ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕೃತ

Update: 2022-09-27 12:06 GMT

ಚಿತ್ರದುರ್ಗ, ಸೆ.23: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲ ಅವರು ಮುರುಘಾಶ್ರೀಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದ್ದು, ಇದೇ ತಿಂಗಳ 27ರವರೆಗೆ ಶ್ರೀಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಪೊಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳು ಕಳೆದ ಸೆ.5ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕಳೆದ 15 ದಿನಗಳಿಂದ ವಾದ-ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡದೇ ಇರುವ ನಿರ್ಧಾರಕ್ಕೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News