ಸುರತ್ಕಲ್ ನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Update: 2022-09-23 14:50 GMT

ಸುರತ್ಕಲ್, ಸೆ.23: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಹಾಗೂ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆ ಸುರತ್ಕಲ್ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು 2022 "ಪ್ರತಿಭಾಮೃತ"ವು  ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆಯಿತು.

ಸಭಾಕಾರ್ಯಕ್ರಮವನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಗಾಯತ್ರಿ ಪೂಜಾರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮನಪಾ ಸದಸ್ಯ ವರುಣ್ ಔಟ ಅವರು "ಪ್ರತಿಭಾಮೃತ" ಲಾಂಛನ ಬಿಡುಗಡೆ ಗೊಳಿಸಿವ ಮೂಲಕ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು-2022ನ್ನು ಉದ್ಘಾಟನೆಗೈದರು. 

ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪುಂಜ ಎ.ವಿ. ವಹಿಸಿದ್ದರು.
ಸಮಾರಂಭದಲ್ಲಿ ಮಂಗಳೂರು ಉತ್ತರ ವಿಭಾಗದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್ ಕೆ. ಮಂಗಳೂರು ಉತ್ತರ ವಿಭಾಗದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜಿ. ಉಸ್ಮಾನ್, ವಿಷಯ ಪರಿವೀಕ್ಷಕರಾದ ಶೋಭಾ, ಶಿಕ್ಷಣ ಸಂಯೋಜಕರು ಮತ್ತು ಪ್ರತಿಭಾ ಕಾರಂಜಿಯ ತಾಲೂಕು ನೋಡಲ್ ಅಧಿಕಾರಿ ಲಲಿತ ಬಿ. ರಾವ್, ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಐ.‌ಕ್ರಿಸ್ಟೋಫರ್ ಕೋಟ್ಯಾನ್, ಎಲ್ಲಾ ಶಿಕ್ಷಕ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು,  ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು ಹಾಗೂ ಪ್ರತಿಭಾ ಕಾರಂಜಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಮಂಜುಳಾ ಶೆಟ್ಟಿ ಮತ್ತು ಚಿತ್ರಾಶ್ರೀ ಕೆ. ಎಸ್. ನಿರೂಪಣೆಗೈದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಮೂಕ ಪಾತ್ರ ಅಭಿನಯ, ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ದತ್ಯ ಕಾರ್ಯಕ್ರಮ, ಮಣ್ಣಿನಲ್ಲಿ ಮೂರ್ತಿ ರಚನೆ, ಶೈಕ್ಷಣಿಕ ಸಂಬಂಧಿತ ಸ್ಪರ್ಧೆಗಳು ಹಾಗೂ ಹಲವು ಬಗೆಯ ಸ್ಪರ್ಧೆಗಳು ನಡೆದವು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News