ನೀರಿನ ಲಭ್ಯತೆಯನ್ನು ಆಧರಿಸಿ ಯೋಜನೆ ರೂಪಿಸಿ: ಪ್ರಸನ್ನ ಎಚ್

Update: 2022-09-23 15:24 GMT

ಉಡುಪಿ, ಸೆ.23: ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಆಧರಿಸಿ ಕುಡಿಯುವ ನೀರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸು ವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ. 

ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಲಜೀವನ್ ಮಿಷನ್ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ನೇ ಸಾಲಿನ ಒಳಗಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲಾ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಜಲಮೂಲಗಳ ಲಭ್ಯತೆಯ ಆಧಾರದಲ್ಲಿ ನೀರು ಸರಬರಾಜು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಅವರು ತಿಳಿಸಿದರು.

ಕಾಪು ತಾಲೂಕಿನ ಕುರ್ಕಾಲು, ಮೂಡಬೆಟ್ಟು, ಇನ್ನಂಜೆ, ಪಾಂಗಾಳ, ಏಣಗುಡ್ಡೆ, ಮಟ್ಟು ಮತ್ತು ಕೋಟೆ ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಏಕ ಗ್ರಾಮ ಕಾಮಗಾರಿ ಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ವಿಸ್ಕೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಬಿ.ಟಿ.ಮೋಹನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News