ಉಡುಪಿ: ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ

Update: 2022-09-23 15:37 GMT
ಸಾಂದರ್ಭಿಕ ಚಿತ್ರ

ಉಡುಪಿ, ಸೆ.23: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸೆ.28ರಂದು ಬೆಳಗ್ಗೆ 9.30ರಿಂದ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕ್ರೀಡಾ ವಿಭಾಗದಲ್ಲಿ 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಬಾಂಬ್ ಇನ್‌ದ ಸಿಟಿ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆಗಳು ನಡೆಯಲಿವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820-2574810, 2574811ಅನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News