ಸಿಇಟಿ ರ‍್ಯಾಂಕಿಂಗ್ ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ರ‍್ಯಾಂಕಿಂಗ್ ಪ್ರಕಟ: ಸಚಿವ ಅಶ್ವತ್ಥ ನಾರಾಯಣ

Update: 2022-09-23 16:46 GMT

ಬೆಂಗಳೂರು: ವೃತಿಪರ ಕೋರ್ಸ್ ಗಳ ಸಿಇಟಿ ರ‍್ಯಾಂಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು  ಇದೇ 29ರಂದು ಬಿಡುಗಡೆ ಮಾಡಲಾಗುವುದು. ಜತೆಗೆ ಅಕ್ಟೋಬರ್‌ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು. ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News