ವಿದ್ಯುತ್‌ ದರದಲ್ಲಿ ಮತ್ತೆ ಏರಿಕೆ: ರಾಜ್ಯ ಸರಕಾರದಿಂದ ಗ್ರಾಹಕರಿಗೆ ಹೊರೆ

Update: 2022-09-23 18:32 GMT

ಬೆಂಗಳೂರು, ಸೆ.23: ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್‌ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

ಪ್ರಸಕ್ತ ಸಾಲಿನ ಎಪ್ರಿಲ್ ನಿಂದ ಜೂನ್ ವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್‌ಸಿಗೆ ಆ.30ರಂದು ಅರ್ಜಿ ಸಲ್ಲಿಸಿತ್ತು. ಕಳೆದ ಜುಲೈ ನಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ ಯುನಿಟ್‌ಗೆ 31 ಪೈಸೆಯಷ್ಷು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News