ಬಿಎಂಎಸ್ ಟ್ರಸ್ಟ್ ನಲ್ಲಿ ಅಕ್ರಮ ಆರೋಪ: ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಜೆಡಿಎಸ್ ಪ್ರತಿಭಟನೆ
Update: 2022-09-24 18:57 IST
ಬೆಂಗಳೂರು, ಸೆ.24: ‘ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್‍ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಲಪಟಾಯಿಸಲು ನೆರವು ನೀಡಿರುವ ಆರೋಪ ಹೊತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸಚಿವರ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ಸಚಿವ ಸ್ಥಾನಕ್ಕೆ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಡೀ ಬಿಎಂಸ್ ಟ್ರಸ್ಟ್‍ಅನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.